ಮಂಗಳೂರು: ಲೆಕ್ಕಪತ್ರ ವ್ಯವಸ್ಥೆಯು ಪಾರದರ್ಶಕವಾಗಿರಬೇಕು: ರಾಜು ಮೊಗವೀರ

ಮಂಗಳೂರು: ಕಂಪನಿ ಮತ್ತು ಸಂಸ್ಥೆಗಳು ಏಕರೂಪದ ಹಾಗೂ ಪಾರದರ್ಶಕವಾದ ಲೆಕ್ಕಪತ್ರ ವ್ಯವಸ್ಥೆಯನ್ನು ಹೊಂದಿರಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ರಾಜು ಮೊಗವೀರ ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ಅಧ್ಯಯನ ವಿಭಾಗ ಮತ್ತು ಅಸೋಸಿಯೇಷನ್ ಆಪ್ ಸರ್ಟಿಫೈಡ್ ಚಾರ್ಟೆಡ್ ಅಕೌಂಟೆಂಟ್ಸ್ ಇವರ ಸಂಯುಕ್ತ ಆಶಯದಲ್ಲಿ ಶ್ರೀನಿವಾಸ ಮಲ್ಯ ಸಭಾಂಗಣದಲ್ಲಿ ನಡೆದ ಇಂಟರ್ನ್ಯಾಷನಲ್ ಫೈನಾನ್ಸಿಯಲ್ ರಿಪೋರ್ಟಿಂಗ್ ಸ್ಟ್ಯಾಂಡರ್ಡ್ (ಐ.ಎಫ್.ಆರ್.ಎಸ್) ಕಾರ್ಯಗಾರದಲ್ಲಿ ಮಾತನಾಡುತ್ತಾ ಜನಸಾಮಾನ್ಯರಿಗೆ ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ಲೆಕ್ಕಪತ್ರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಬೇಕು ಹಾಗೂ ಪ್ರಪಂಚ ಮತ್ತು ದೇಶದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಪದ್ಧತಿಯನ್ನು […]