ಹುತಾತ್ಮ ವೀರಯೋಧರಿಗೆ ಕಾಂಗ್ರೆಸ್ ನಿಂದ ಗೌರವ ಸಲ್ಲಿಕೆ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಜ್ಜರಕಾಡಿನ ಸೈನಿಕ ಯುದ್ಧ ಸ್ಮಾರಕದ ಬಳಿ ಈಚೆಗೆ ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಎಂ.ಎ. ಗಫೂರ್, ರಮೇಶ್ ಕಾಂಚನ್, ಹರೀಶ್ ಕಿಣಿ ಅಲೆವೂರು, ನರಸಿಂಹಮೂರ್ತಿ, ಭಾಸ್ಕರ್ ರಾವ್ ಕಿದಿಯೂರು, ದಿನೇಶ್ ಪುತ್ರನ್ , ಉದ್ಯಾವರ ನಾಗೇಶ್ ಕುಮಾರ್, ಸತೀಶ್ ಅಮೀನ್ ಪಡುಕರೆ, ಜನಾರ್ದನ ಭಂಡಾರ್ಕರ್ ಮೊದಲಾದವರು ಇದ್ದರು.