ಉಡುಪಿ: ಅ.2ರಂದು ಬೃಹತ್ ಜಾಥಾ ಮತ್ತು ಜನಜಾಗೃತಿ ಸಮಾವೇಶ

ಉಡುಪಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ ಇದರ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಅಕ್ಟೋಬರ್ 2ರಂದು ಬೆಳಿಗ್ಗೆ ಗಂಟೆ 9ಕ್ಕೆ ಉಡುಪಿಯ ಜೋಡುಕಟ್ಟೆಯಿಂದ ರಾಜಾಂಗಣದವರೆಗೆ ‘ಬೃಹತ್ ಜನಜಾಗೃತಿ ಜಾಥಾ’ ಹಾಗೂ 11ಗಂಟೆಗೆ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ‘ಬೃಹತ್ ಜನಜಾಗೃತಿ ಸಮಾವೇಶ’ ವನ್ನು ಆಯೋಜಿಸಲಾಗಿದೆ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಹೇಳಿದರು. ಉಡುಪಿ ಜಿಲ್ಲಾ ಪತ್ರಿಕಾ ಭವನದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, […]