ಉಡುಪಿ: ಹಿಂದೂ ದೇವರ ಅವಹೇಳನ ಖಂಡಿಸಿ ನಾಳೆ (ಜ.11) ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಲ್ಲಿ ಸಾಮೂಹಿಕ ಪ್ರಾರ್ಥನೆ
ಉಡುಪಿ: ಕರಾವಳಿಯಾದ್ಯಂತ ನಡೆಯುತ್ತಿರುವ ಹಿಂದೂ ದೇವರ ಅವಹೇಳನ, ಅಪಹಾಸ್ಯ ಹಾಗೂ ದೇವಸ್ಥಾನಗಳನ್ನು ಅಪವಿತ್ರಗೊಳಿಸಿ ವಿಕೃತಿ ಮೆರೆದಿರುವಂತಹ ಕೃತ್ಯಗಳನ್ನು ಖಂಡಿಸಿ ಜ.11 ರಂದು ಉಡುಪಿ ಜಿಲ್ಲೆಯಾದ್ಯಂತ ದೇವಸ್ಥಾನ ಹಾಗೂ ದೈವಸ್ಥಾನಗಳಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೆ ಸಾಮೂಹಿಕ ಪ್ರಾರ್ಥನೆ ಆಯೋಜಿಸಲಾಗಿದೆ ಎಂದು ಉಡುಪಿ ಜಿಲ್ಲಾ ವಿಶ್ವ ಹಿಂದು ಪರಿಷತ್ ಭಜರಂಗದಳದ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ತಿಳಿಸಿದ್ದಾರೆ. ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕರಾವಳಿ ಭಾಗದಲ್ಲಿ ಹಲವಾರು ಸಮಯಗಳಿಂದ ದೇವರ, ದೈವಗಳಿಗೆ ಅಪಹಾಸ್ಯ, ನಿಂದನೆ […]