ಮತ್ಸ್ಯಗಂಧ ಎಕ್ಸ್ಪ್ರೆಸ್’ನಲ್ಲಿ ಕಳಪೆ ಎಲ್‌ಎಚ್‌ಬಿ ಕೋಚ್‌ಗಳ ಅಳವಡಿಕೆ; ಕೂಡಲೇ ಸರಿಪಡಿಸುವಂತೆ ಸಚಿವರಿಗೆ ಕೋಟ ಶ್ರೀನಿವಾಸ್ ಪೂಜಾರಿ ಮನವಿ.

ಉಡುಪಿ: ಮುಂಬಯಿ ಮತ್ತು ಮಂಗಳೂರು ನಡುವೆ ಕಳೆದ ಮೂರು ದಶಕಗಳಿಂದ ಸಂಚರಿ ಸುತ್ತಿರುವ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿಗೆ ಕಳೆದ ತಿಂಗಳು ಅಳವಡಿಸಿದ ಅತ್ಯಾಧುನಿಕ ಎಲ್‌ಎಚ್‌ಬಿ ಕೋಚ್‌ಗಳು ಕಳಪೆಯಾಗಿದ್ದು, ಅವುಗಳಲ್ಲಿರುವ ಲೋಪಗಳ ಕುರಿತು ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣರನ್ನು ಭೇಟಿ ಮಾಡಿದ ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಕೋಚ್‌ಗಳಲ್ಲಿರುವ ಲೋಪಗಳನ್ನು ಕೂಡಲೇ ಸರಿಪಡಿಸುವಂತೆ ಮನವಿ ಅರ್ಪಿಸಿ ಒತ್ತಾಯಿಸಿದರು. ಮತ್ಸ್ಯಗಂಧ ರೈಲಿಗೆ 2024ರಲ್ಲಿ ತಯಾರಾದ ಹೊಸ ಎಲ್‌ಎಚ್‌ಬಿ ಕೋಚ್‌ಗಳ […]