ಕುಂದಾಪುರ: ಕೆರೆಗೆ ಬಿದ್ದು ವೈದ್ಯಕೀಯ ವಿದ್ಯಾರ್ಥಿ ಮೃತ್ಯು

ಕುಂದಾಪುರ: ವೈದ್ಯಕೀಯ ವಿದ್ಯಾರ್ಥಿಯೊಬ್ಬ ಕೋಟಿಲಿಂಗೇಶ್ವರ ದೇವಸ್ಥಾನದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ. ಹಂಗಳೂರಿನ ಗೌರೀಶ್ ಬಿ.ಆರ್ (25) ಮೃತಪಟ್ಟವರು ಎಂದು ತಿಳಿದುಬಂದಿದೆ. ಬುಧವಾರ ಸಂಜೆ ಈಜುಕೊಳದಲ್ಲಿ ಈಜಲು ಹೋಗುವುದಾಗಿ ಮನೆಯಿಂದ ತೆರಳಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು. ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಕೋಟೇಶ್ವರ ದೇವಸ್ಥಾನದ ಕೆರೆ ಸಮೀಪ ಬುಧವಾರ ತಡರಾತ್ರಿ ಬ್ಯಾಗ್, ಮೊಬೈಲ್ ಫೋನ್, ಚಪ್ಪಲಿ ಕಂಡುಬಂದಿತ್ತು. ಅಂದು ಸಂಜೆ 5.30ರಿಂದ ರಾತ್ರಿ 11 ಗಂಟೆಯ ನಡುವೆ ಕೆರೆಗೆ ಕಾಲುಜಾರಿ ಬಿದ್ದಿರಬಹುದು ಎಂದು ಕುಟುಂಬಿಕರು ಶಂಕಿಸಿದ್ದಾರೆ. […]