ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ: ಮಹಿಳೆಯರ ಸುರಕ್ಷತೆ, ಭದ್ರತೆ ಹಾಗೂ ಸಬಲೀಕರಣಕ್ಕಾಗಿ ಸರಕಾರ ಜಾರಿಗೆ ತಂದಿರುವ ಮಿಷನ್ ಶಕ್ತಿ ಯೋಜನೆಯನ್ನು ಹೆಚ್ಚು ಪರಿಣಾಮ ಕಾರಿಯಾಗಿ ಅನುಷ್ಠಾನಗೊಳಿಸುವುದರೊಂದಿಗೆ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಅನುವು ಮಾಡಿಕೊಡಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಜಿಲ್ಲಾ ಮಟ್ಟದ ವಿವಿಧ ಸಮನ್ವಯ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರಕಾರವು ಮಹಿಳೆಯರ ಹಾಗೂ […]