ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ; 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಸಹಕಾರ ಭಾರತಿ

ಉಡುಪಿ: ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 8 ಸ್ಥಾನಗಳಿಗೆ ಎ.26 ರಂದು ಚುನಾವಣೆ ನಡೆಯಲಿದ್ದು, ಸಹಕಾರ ಭಾರತಿಯು 8 ಕ್ಷೇತ್ರಗಳಿಗೆ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಎಂದು ಸಹಕಾರ ಭಾರತಿಯ ಜಿಲ್ಲಾಧ್ಯಕ್ಷ ದಿನೇಶ್ ಹೆಗ್ಡೆ ಆತ್ರಾಡಿ ಹೇಳಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರಿ ಭಾರತಿ ಬೆಂಬಲದೊಂದಿಗೆ ಕುಂದಾಪುರ ಉಪವಿಭಾಗ ಕ್ಷೇತ್ರದ 7 ಸಾಮಾನ್ಯ ಸ್ಥಾನಗಳಿಗೆ ಅಭ್ಯರ್ಥಿಯಾಗಿ ಮೋಹನ್‌ದಾಸ್ ಅಡ್ಯಂತಾಯ (ಕಾರ್ಕಳ), ಭೋಜ ಪೂಜಾರಿ(ಹೆಬ್ರಿ), ಅಶೋಕ್ ರಾವ್(ಕಾಪು), ಹೆರ್ಗ ದಿನಕರ್ ಶೆಟ್ಟಿ(ಉಡುಪಿ), ಕಾಡೂರು ಸುರೇಶ್ ಶೆಟ್ಟಿ(ಕುಂದಾಪುರ), […]