ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಫೆಲೋಶಿಫ್: ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತ ಸರ್ಕಾರದ ಶಾಸನಬದ್ಧ ಅಂಗೀಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಹೆಚ್.ಡಿ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಪಿ.ಹೆಚ್.ಡಿ ಮೂರು ವರ್ಷದ ಅವಧಿಗೆ ಫೆಲೋಶಿಫ್ ಸೌಲಭ್ಯ ಪಡೆಯಲು ಸೇವಾಸಿಂಧು ತಂತ್ರಾಂಶ https://sevasindhu.karnataka.gov.in/sevasindhu/DepartmentService ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 […]