ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಕಟಪಾಡಿಯಲ್ಲಿರುವ ಮಹೇಶ್ ಫರ್ನಿಚರ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಕುತ್ಪಾಡಿಯ ಜಗದೀಶ್(42) ಎಂಬವರು ಮಾ.6ರಂದು ರಾತ್ರಿ ಊಟ ಮಾಡಿ ಮನೆಯಿಂದ ಹೊರಗೆ ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ:ಯುವಕ ನಾಪತ್ತೆ

ಉಡುಪಿ: ನಗರದ ಶೋ ರೂಂ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಮೂಡುಬೆಳ್ಳೆಯ ಮಡಿಕೆಟ್ಟು ತಿರ್ಲಪಕ್ಕೆ ನಿವಾಸಿ ಜಯಪ್ರಕಾಶ್ (26) ಎಂಬ ವ್ಯಕ್ತಿಯು ಫೆಬ್ರವರಿ 27 ರಂದು ಕೆಲಸಕ್ಕೆ ಹೋದವರು ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ. 175 ಸೆ.ಮೀ ಎತ್ತರ, ಸಾದಾರಣ ಮೈಕಟ್ಟು, ಎಣ್ಣೆ ಕಪ್ಪು, ದಂಡು ಮುಖ ಹೊಂದಿದ್ದು ಹಿಂದಿ, ಕನ್ನಡ ಮತ್ತು ತುಳು ಭಾಷೆ ಮಾತನಾಡುತ್ತಾರೆ ಇವರ ಬಗ್ಗೆ ಮಾಹಿತಿ ದೊರತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿ […]
ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ಗೋಪಾಲಪುರ ನಿವಾಸಿ ಚಂದ್ರಶೇಖರ ಪಾಲನ್ (52) ಎಂಬ ವ್ಯಕ್ತಿಯು ಫೆಬ್ರವರಿ 13 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 168 ಸೆಂ.ಮೀ ಎತ್ತರ, ಕೋಲು ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡುಮುಖ ಹೊಂದಿದ್ದು, ಕನ್ನಡ, ಹಿಂದಿ, ಮರಾಠಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ನಗರದ ಖಾಸಗಿ ಬಸ್ಸಿನ ಚೆಕಿಂಗ್ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕುಂದಾಪುರ ಕಸಬಾ ಗ್ರಾಮದ ನಿವಾಸಿ ಸುಧೀಂದ್ರ (40) ಎಂಬ ವ್ಯಕ್ತಿಯು ಡಿಸೆಂಬರ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಗೋದಿ ಮೈಬಣ್ಣ ಹೊಂದಿದ್ದು, ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ: 08254-230338 ಅಥವಾ ಪಿ.ಐ ಕುಂದಾಪುರ ಠಾಣೆ ಮೊ.ನಂ:9480805455 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.