ಜೂ.21: ಉಡುಪಿ ಮಿಷನ್ ಆಸ್ಪತ್ರೆಯಲ್ಲಿ ಹೋಮ್ ಕೇರ್- ನೇತ್ರಶಾಸ್ತ್ರ ವಿಭಾಗಗಳ ಉದ್ಘಾಟನೆ
ಉಡುಪಿ, ಜೂ.21: ಉಡುಪಿಯ ಸಿಎಸ್ಐ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆಯಲ್ಲಿ ಲೊಂಬಾರ್ಡ್ ಹೋಮ್ ಕೇರ್ (ಮನೆ ಆರೈಕೆ) ಸೇವೆಗಳು ಮತ್ತು ಹೊಸ ನೇತ್ರಶಾಸ್ತ್ರ ವಿಭಾಗವು ಜೂ.21ರಂದು ಪೂರ್ವಾಹ್ನ 11 ಗಂಟೆಗೆ ಚಿಟ್ಟಾಡಿಯ ಆಸ್ಪತ್ರೆ ಆವರಣದಲ್ಲಿ ಉದ್ಘಾಟನೆಗೊಳ್ಳಲಿದೆ. ನೂತನ ಸೇವೆಗಳನ್ನು ಸಿಎಸ್ ಎ ಕರ್ನಾಟಕ ದಕ್ಷಿಣ ಧರ್ಮಪ್ರಾಂತದ ಬಿಷಪ್ ಅತಿ ವಂ.ಹೇಮಚಂದ್ರ ಕುಮಾರ್ ಉದ್ಘಾಟಿಸಲಿರುವರು. ಆಸ್ಪತ್ರೆಯ ನೇತ್ರತಜ್ಞ ಡಾ.ನರೇಂದ್ರ ಶೆಣೈ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ಆಸ್ಪತ್ರೆಯ ನೇತ್ರತಜ್ಞ ಡಾ.ಆರ್ಥರ್ ರೋಡ್ರಿಗಸ್ ಮತ್ತು ಹಿರಿಯ ವೈದ್ಯಾಧಿಕಾರಿ ಡಾ.ಗಣೇಶ್ ಕಾಮತ್ ಗೌರವ […]