ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮನೆಗೆ ಶಾಸಕ ರಘುಪತಿ ಭಟ್ ಭೇಟಿ; ಹೊಸ ರಾಜಕೀಯ ಲೆಕ್ಕಾಚಾರ ಶುರು

ಉಡುಪಿ: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಪ್ರಮೋದ್ ಮಧ್ವರಾಜ್ ಇಂದು ತಮ್ಮ ರಾಜಕೀಯ ಎದುರಾಳಿ ಉಡುಪಿ‌ ಬಿಜೆಪಿ ಶಾಸಕ ರಘುಪತಿ ಭಟ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ತಮ್ಮ ಮನೆಗೂ ಅವರನ್ನು ಆಹ್ವಾನಿಸಿ ಇಬ್ಬರೂ ಒಟ್ಟಿಗೆ ಉಪಾಹಾರ ಸೇವಿಸುವ ಮೂಲಕ ಹೊಸ ರಾಜಕೀಯ ಚರ್ಚೆ ಹುಟ್ಟುಹಾಕಿದ್ದಾರೆ. ಪ್ರಮೋದ್ ಅವರು ಕಳೆದ ಮೂರ್ನಾಲ್ಕು ವರ್ಷಗಳಿಂದ ತಮ್ಮ ರಾಜಕೀಯ ಜೀವನದ ಬಗ್ಗೆ ಕಿಂಚಿತ್ತೂ ಸುಳಿವು ಬಿಟ್ಟುಕೊಡುತ್ತಿಲ್ಲ. ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಕೊನೆ […]