ಉಡುಪಿ:ಹದಿನೈದು ದಿನಗಳ ಒಳಗಾಗಿ ಏಕವಿನ್ಯಾಸ ನಕ್ಷೆ ಸಮಸ್ಯೆ ಬಗೆಹರಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಉಡುಪಿ: ಜನಸಾಮಾನ್ಯರಿಂದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಏಕ ವಿನ್ಯಾಸ ನಕ್ಷೆಯ ಸಮಸ್ಯೆಗಳ ಬಗ್ಗೆ ದಿನೇ ದಿನೇ ದೂರುಗಳು ಕೇಳಿ ಬರುತ್ತಿದ್ದು, ಇದರಿಂದಾಗಿ ಗೃಹ ನಿರ್ಮಾಣ ಮತ್ತು ಕಟ್ಟಡಗಳನ್ನು ಕಟ್ಟಲು ತೊಂದರೆಯಾಗುತ್ತಿದೆ. ಇದನ್ನು ಹದಿನೈದು ದಿನಗಳ ಒಳಗಾಗಿ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಏಕನಿವೇಶನ ನಕ್ಷೆ ಹಾಗೂ ನಮೂನೆ 9/11 ರಲ್ಲಿ ಎದುರಾಗುತ್ತಿರುವ […]