ಉಡುಪಿ: ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಜಿಲ್ಲೆಯಾದ್ಯಂತ 2500ಕ್ಕೂ ಅಧಿಕ ಕುಟುಂಬಗಳಿಗೆ ರೇಷನ್ ಕಿಟ್ ವಿತರಣೆ

ಹೂಡೆ: ಜಮಾಅತೆ ಇಸ್ಲಾಮಿ ಹಿಂದ್ ಉಡುಪಿ ಜಿಲ್ಲೆಯ ವತಿಯಿಂದ ಮುಸ್ಲಿಮರ ಪವಿತ್ರ ಮಾಸ ರಂಝಾನ್ ಪ್ರಯುಕ್ತ ಲಾಕ್ ಡೌನ್ ನ ಹಿನ್ನಲೆಯಲ್ಲಿ ಸಂಕಷ್ಟದಲ್ಲಿದ್ದ ಸುಮಾರು ಎರಡು ಸಾವಿರಕ್ಕಿಂತ ಅಧಿಕ ಕುಟುಂಬಗಳಿಗೆ ರೇಷನ್ ಕಿಟ್ ನೀಡಿ ನೆರವಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ,ಬ್ರಹ್ಮಾವರ, ಕಾಪು, ಕಾರ್ಕಳ, ಉಡುಪಿ ತಾಲೂಕಿನ ಬಡ ಕುಟುಂಬಕ್ಕೆ ಈ ರೇಷನ್ ಕಿಟ್ ಗಳನ್ನು ತಲುಪಿಸಲಾಗಿದೆ. ಈ ಸಂಬಂಧ ಮಾಹಿತಿ ನೀಡಿರುವ ಜೆ.ಐ.ಎಚ್ ಹೂಡೆಯ ಅಧ್ಯಕ್ಷರಾದ ಅಬ್ದುಲ್ ಕಾದೀರ್ ಮೊಯ್ದಿನ್, ಸಂಕಷ್ಟದ ಸಂದರ್ಭದಲ್ಲಿ ಜನರ ನೋವಿಗೆ ಸ್ಪಂದಿಸುವುದು […]