ಉಡುಪಿ: 50ಕ್ಕೂ ಅಧಿಕ ದಲಿತರು ಬೌದ್ಧ ಧರ್ಮಕ್ಕೆ ಮತಾಂತರ
ಉಡುಪಿ: ಇಲ್ಲಿನ ಆದಿಉಡುಪಿ ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಅವರ 64 ನೇ ಧಮ್ಮ ಚಕ್ರ ಪ್ರವರ್ತನಾ ದಿನಾಚರಣೆಯಲ್ಲಿ ಜಿಲ್ಲೆಯ 50ಕ್ಕೂ ಅಧಿಕ ದಲಿತರು ಬೌದ್ಧಧರ್ಮಕ್ಕೆ ಸೇರ್ಪಡೆಗೊಂಡರು. ಉಡುಪಿ ಜಿಲ್ಲಾ ಬೌದ್ಧ ಮಹಾ ಸಭಾ ಇದರ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮೈಸೂರು ಕೊಳ್ಳೆಗಾಲದ ಜೀವನ ಬುದ್ಧ ವಿಹಾರದಿಂದ ಆಗಮಿಸಿದ್ದ ಸುಗತಪಾಲ ಭಂತೇಜಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ದಲಿತರಿಗೆ ಪ್ರಮಾಣವಚನ ಬೋಧಿಸಿದರು. ಇದೇ ವೇಳೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಾಧಿಕ ಅಂಕಗಳಿಸಿದ 30ಕ್ಕೂ […]