ಉಡುಪಿ: “ಮಿಸೆಸ್ ಅರ್ಥ್ ಇಂಟರ್‌ನ್ಯಾಶನಲ್ ಟೂರಿಸಂ 2024” ಕಿರೀಟ ಮುಡಿಗೇರಿಸಿಕೊಂಡ ಖ್ಯಾತ ಮಧುಮೇಹ ತಜ್ಞೆ ಡಾ.ಶ್ರುತಿ ಬಲ್ಲಾಳ್

ಉಡುಪಿ: ಫಿಲಿಪೈನ್ಸ್‌ನ ಮನಿಲಾದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ.ಶ್ರುತಿ ಬಲ್ಲಾಳ್ ಅವರು ಮಿಸೆಸ್ ಅರ್ಥ್ ಇಂಟರ್‌ನ್ಯಾಶನಲ್ ಟೂರಿಸಂ 2024 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಹಾಗೆಯೇ ಮಿಸೆಸ್ ಅರ್ಥ್ ಇಂಟರ್‌ನ್ಯಾಶನಲ್ 2024ರ ರಾಯಭಾರಿ ಕಿರೀಟವನ್ನು ಅಲಂಕರಿಸಿಕೊಂಡಿದ್ದಾರೆ. ಆ ಮೂಲಕ ಭಾರತಕ್ಕೆ ಹೆಮ್ಮೆ ತಂದಿದ್ದಾರೆ. ಮಧುಮೇಹ ಜಾಗೃತಿ:ಡಾ. ಶ್ರುತಿ ಬಲ್ಲಾಳ್ ಅವರು ತಮ್ಮ ವೃತ್ತಿಜೀವನವನ್ನು ಮಧುಮೇಹ ತಡೆಗಟ್ಟುವಿಕೆ ಮತ್ತು ಆರಂಭಿಕ ಪತ್ತೆಗೆ ಮುಡಿಪಾಗಿಟ್ಟಿದ್ದಾರೆ. ತಳಮಟ್ಟದಲ್ಲಿ 100 ಕ್ಕೂ ಹೆಚ್ಚು ಉಚಿತ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಬದಲಾವಣೆಗೆ […]