ಉಡುಪಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಮತಾಂತರ ಗದ್ದಲ

ಉಡುಪಿ: ಉಡುಪಿ ನಗರಸಭೆಯ ಸಭಾಂಗಣದಲ್ಲಿ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಜೋಡುಕಟ್ಟೆಯ ಡಯಾನ ಹೋಟೆಲ್ ಸಮೀಪದ ಪ್ರಾರ್ಥನ ಮಂದಿರವೊಂದರಲ್ಲಿ ಮತಾಂತರ ನಡೆಯುತ್ತಿದೆ ಎನ್ನುವ ವಿಷಯ ಭಾರೀ ಗದ್ದಲಕ್ಕೆ ಕಾರಣವಾಯಿತು.ವಿಷಯ ಪ್ರಸ್ತಾಪಿಸಿದ ಆಡಳಿತ ಸದಸ್ಯ ವಿಜಯ ಕೊಡವೂರು ಅವರು, ಈ ಕಟ್ಟಡದಲ್ಲಿ ಮತಾಂತರ ನಡೆಯುತ್ತಿರುವ ಬಗ್ಗೆ ಅನುಮಾನವಿದೆ. ಶಿಕ್ಷಣ ನೀಡುವುದರ ಜೊತೆಗೆ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇದಕ್ಕೆ ಕಾನೂನಿನಲ್ಲಿ ಅವಕಾಶವಿದೆಯೇ..? ನಗರಸಭೆಯ ಕಡತಗಳಲ್ಲಿ ಈ ಕಟ್ಟಡಕ್ಕೆ ಯಾವ ಪರವಾನಿಗೆ ನೀಡಲಾಗಿದೆ ಎಂದು ಪ್ರಶ್ನಿಸಿದರು. ಇದಕ್ಕೆ ಧ್ವನಿಗೂಡಿಸಿದ ಶಾಸಕ ಯಶ್ ಪಾಲ್ […]