ಸಮಾರಂಭ, ಖಾದ್ಯ ಮಳಿಗೆಗಳಲ್ಲಿ ಮರು ಬಳಕೆಯ ವಸ್ತುಗಳನ್ನು ಬಳಸುವುದು ಕಡ್ಡಾಯ: ಉಡುಪಿ ನಗರಸಭೆ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಮನೆ, ಮದುವೆ ಹಾಲ್, ಹೊಟೇಲ್‌ಗಳಲ್ಲಿ ಸಮಾರಂಭ ಮಾಡುವಾಗ ಹಾಗೂ ರಸ್ತೆ ಬದಿ ಟೀ, ಕಾಫಿ, ತಿಂಡಿ ಮಾರಾಟ ಮಾಡುವವರು ರಾಜ್ಯ ಸರ್ಕಾರದ ನಿರ್ದೇಶನದಂತೆ ರೆಡ್ಯೂಸ್,ರೀಯೂಸ್ ಹಾಗೂ ರೀಸೈಕಲ್ ಮಾದರಿಯಲ್ಲಿ ಮರುಬಳಕೆಯ ವಸ್ತುಗಳಾದ ಸ್ಟೀಲ್ ಲೋಟ, ಸ್ಟೀಲ್ ತಟ್ಟೆಗಳನ್ನು ಕಡ್ಡಾಯವಾಗಿ ಬಳಸಿ ತ್ಯಾಜ್ಯವನ್ನು ಕಡಿಮೆ ಮಾಡಬೇಕು ಹಾಗೂ ಪ್ರಸ್ತುತ ಬಳಸುತ್ತಿರುವ ಪೇಪರ್ ಪ್ಲೇಟ್, ಪೇಪರ್ ಗ್ಲಾಸ್ ಮತ್ತು ಟಿಶ್ಯೂಗಳನ್ನು ಬಳಸಬಾರದು. ಉಡುಪಿ ನಗರವನ್ನು ಕಸ ಮುಕ್ತ ನಗರವನ್ನಾಗಿಸಲು, ಸಾರ್ವಜನಿಕರ ಆರೋಗ್ಯ ಕಾಪಾಡುವ […]

ಉಡುಪಿ ನಗರಸಭೆ ನಗರೋತ್ಥಾನ ಅನುದಾನದಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ: ಉಡುಪಿ ನಗರಸಭೆಯ ನಗರೋತ್ಥಾನ 4 ನೇ ಹಂತದ ಅನುದಾನದಡಿ ಶೇ.24.10, ಶೇ.7.25 ಮತ್ತು ಶೇ.5ಕ್ಕೆ ಮಂಜೂರಾದ ಮೊತ್ತದಲ್ಲಿ, ಪ.ಜಾತಿ, ಪ.ಪಂಗಡ, ಬಡಜನರು ಮತ್ತು ವಿಕಲಚೇತನರಿಗೆ ವಿವಿಧ ಸೌಲಭ್ಯಗಳಿಗೆ ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಿದ್ದು, 2022-23 ನೇ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ, ಪಡಿತರ ಚೀಟಿ ಪ್ರತಿ, ಆಧಾರ್ ಕಾರ್ಡ್ ಪ್ರತಿಯೊಂದಿಗೆ ಡಿಸೆಂಬರ್ 31 ರೊಳಗೆ ನಗರಸಭಾ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.