ಉಡುಪಿ: ನಾಗರಿಕ ಸಮಿತಿಗೆ ದೇಣಿಗೆ ಹಸ್ತಾಂತರ
ಉಡುಪಿ: ಕೇರಳ ಕಲ್ಚರಲ್ ಮತ್ತು ಸೋಶಿಯಲ್ ಸೆಂಟರ್ ಉಡುಪಿ ಇದರ ವತಿಯಿಂದ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಾಮಾಜಿಕ ಸೇವಾಕಾರ್ಯಗಳಿಗೆ ವಿನಿಯೋಗಿಸಲು ಹತ್ತು ಸಾವಿರ ದೇಣಿಗೆಯನ್ನು ನೀಡಲಾಯಿತು. ಟ್ರಸ್ಟ್ ನ ಅಧ್ಯಕ್ಷರಾದ ಎಸ್ ಕುಮಾರ್ ಅವರು ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರಿಗೆ ದೇಣಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಸದಸ್ಯರಾದ ಕೆ ಬಾಲಗಂಗಾಧರ ರಾವ್, ತಾರಾನಾಥ್ ಮೇಸ್ತ ಶಿರೂರು ಅವರು ಉಪಸ್ಥಿತರಿದ್ದರು.