ಉಡುಪಿ:ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಂಪೂರ್ಣ ನಿಯಂತ್ರಣಕ್ಕೆ ಕ್ರಮವಹಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಣಿಕೆ, ಮಾರಾಟ ಹಾಗೂ ಅವುಗಳ ಬಳಕೆಯಾಗುವುದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ (Narco Co-ordination Center)ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಾದಕ ವಸ್ತುಗಳಿಗೆ ಯುವ ಸಮುದಾಯ ಹೆಚ್ಚು ಆಕರ್ಷಿತವಾಗುತ್ತಿದೆ. ಇವುಗಳ ಬಳಕೆಯಿಂದ ದೇಹದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು […]