ಹೆದ್ದಾರಿ ಕಾಮಗಾರಿಗೆ ಆಕ್ಷೇಪ ಸರಿಯಲ್ಲ: ಭಾಸ್ಕರ ಶೆಟ್ಟಿ

ಉಡುಪಿ: ಅಂಬಲಪಾಡಿ ಜಂಕ್ಷನ್‌ನಲ್ಲಿ ಕಾಮಗಾರಿ ಆರಂಭವಾಗಿದ್ದು, ಗುತ್ತಿಗೆದಾರರು ಒಂದೂವರೆ ವರ್ಷದೊಳಗೆ ಕಾಮಗಾರಿ ಮುಗಿಸುವ ಭರವಸೆ ನೀಡಿದ್ದಾರೆ. ಈ ಕಾಮಗಾರಿಯಿಂದ ಯಾರಿಗೂ ಸಮಸ್ಯೆ ಆಗುವುದಿಲ್ಲ. ಆದುದರಿಂದ ಇದಕ್ಕೆ ಆಕ್ಷೇಪ ಸಲ್ಲಿಸುವುದು ಸರಿಯಲ್ಲ ಎಂದು ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಬಳಕೆದಾರರ ವೇದಿಕೆ ಸಂಚಾಲಕ ಭಾಸ್ಕರ ಶೆಟ್ಟಿ ಹೇಳಿದರು. ಅಂಬಲಪಾಡಿ ಜಂಕ್ಷನ್ ಮೇಲ್ಸೇತುವೆ ಅಂಡರ್ ಪಾಸ್ ಕಾಮಗಾರಿಯಿಂದ ಆಗಿರುವ ಗೊಂದಲದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಹೆದ್ದಾರಿ ಕಾಮಗಾರಿ ನಡೆಯುವಾಗ ಸಂಚಾರದಲ್ಲಿ ತೊಂದರೆ ಆಗುವುದು ಸಾಮಾನ್ಯ. ಅದಕ್ಕೆ ಸಾರ್ವಜನಿಕರು ಹಾಗೂ […]