ಉಡುಪಿ: ಸಾರ್ವಜನಿಕ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಸ್ ಚಲಾಯಿಸಿದ ಇಬ್ಬರು ಚಾಲಕರ ವಿರುದ್ಧ ಪ್ರಕರಣ ದಾಖಲು

ಉಡುಪಿ: ಸಾರ್ವಜನಿಕರ ಜೀವಕ್ಕೆ ಅಪಾಯವಾಗುವ ರೀತಿಯಲ್ಲಿ ಅಡ್ಡಾದಿಡ್ಡಿಯಾಗಿ ಬಸ್ ಚಲಾಯಿಸಿದ ಘಟನೆ ಸಂಬಂಧಿಸಿ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.ಉಡುಪಿ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಪ್ರಕಾಶ್ ಸಾಲಿಯಾನ್ ಅವರು ಅಂಬಲಪಾಡಿ ಗ್ರಾಮದ ಕಿನ್ನಿಮುಲ್ಕಿ ರಾಷ್ಟ್ರೀಯ ಹೆದ್ದಾರಿ-66 ನೇ ಬಳಿ ಇರುವ ಕಾರ್ ಕೇರ್ ಸರ್ವಿಸ್ ಸೆಂಟರ್ ಸ್ವಲ್ಪ ಮುಂದೆ ಸಿಬ್ಬಂದಿಯವರೊಂದಿಗೆ ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಕಿನ್ನಿಮುಲ್ಕಿ ಸ್ವಾಗತ ಗೋಫುರದ ಕಡೆಯಿಂದ ಬಲಾಯಿಪಾದೆ ಕಡೆಗೆ ಆರೋಪಿ ಆಶ್ರಿತ್ ಎಂಬಾತನು […]