ರಾಷ್ಟ್ರೀಯ ಕ್ರೀಡಾ ದಿನಾಚರಣೆ ಮತ್ತು ಬೃಹತ್ ರಕ್ತದಾನ ಶಿಬಿರ

ಉಡುಪಿ: ಮನುಷ್ಯ ಆರೋಗ್ಯಕರವಾಗಿರ ಬೇಕಾದರೆ ಉತ್ತಮ ಆಹಾರ ಪದ್ಧತಿಯ ಜೊತೆಗೆ ದೈಹಿಕ ವ್ಯಾಯಾಮದ ಅಗತ್ಯವೂ ಇದೆ. ವಿದ್ಯಾರ್ಥಿಗಳು ತಮ್ಮನ್ನು ಬೇರೆ ಬೇರೆ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯವನ್ನು ಪಡೆಯಬಹುದು. ಕ್ರೀಡೆಯಿಂದ ದೇಹಕ್ಕೆ ಒಳ್ಳೆಯ ವ್ಯಾಯಾಮ ಸಿಗುವುದರ ಜೊತೆಗೆ ಕೊಲೆಸ್ಟ್ರಾಲ್ ಸಮಸ್ಯೆ, ರಕ್ತದ ಒತ್ತಡ, ಉದಾಸೀನತೆಯಂತಹ ಸಮಸ್ಯೆಯನ್ನು ಹೋಗಲಾಡಿಸಿ, ವಿದ್ಯಾರ್ಥಿಗಳಲ್ಲಿ ಉತ್ತಮ ಯೋಚನೆ ಮತ್ತು ಕ್ರೀಯಾಶೀಲತೆಯನ್ನು ಹೆಚ್ಚಿಸುತ್ತದೆ ಎಂದು ಜಿಲ್ಲೆಯ ಮಾನ್ಯ ಶಾಸಕರಾದ ಶ್ರೀ.ಯಶ್‌ಪಾಲ್ ಸುವರ್ಣ ಅಭಿಪ್ರಾಯ ಪಟ್ಟರು. ಇವರು ಜಿಲ್ಲೆಯ ಡಾ. ಜಿ. ಶಂಕರ್ ಸರಕಾರಿ ಪ್ರಥಮ […]