ಉಡುಪಿ: ಪ್ರಾಕೃತಿಕ ವಿಕೋಪ ಹಾನಿ ಕಾಮಗಾರಿಗಳ ಬಗ್ಗೆ ತಕ್ಷಣ ಕ್ರಮ ವಹಿಸಿ; ನಗರಸಭೆ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ

ಉಡುಪಿ: ಇತ್ತೀಚೆಗೆ ಸುರಿದ ಭಾರೀ ಗಾಳಿ ಮಳೆಗೆ ನಗರಸಭಾ ವ್ಯಾಪ್ತಿಯ ಹಲವೆಡೆ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ, ರಸ್ತೆಗಳಲ್ಲಿ ಗುಂಡಿ, ಅಸಮರ್ಪಕ ಚರಂಡಿ ವ್ಯವಸ್ಥೆ ಸಹಿತ ವಿವಿಧ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಪ್ರಾಕೃತಿಕ ವಿಕೋಪದ ಹಿನ್ನೆಲೆಯಲ್ಲಿ ತುರ್ತು ಕಾಮಗಾರಿಗಳನ್ನು ನಡೆಸುವಂತೆ ನಗರಸಭೆ ಅಧಿಕಾರಿಗಳಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ ನೀಡಿದರು. ಉಡುಪಿ ನಗರ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕರು ನಗರದ ಪ್ರಮುಖ ರಸ್ತೆಯ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಕ್ರಮ ವಹಿಸಿ,ಮುಂಬರುವ ಹಬ್ಬಗಳ […]