ಉಡುಪಿ:ಸಂಭವನೀಯ ಪ್ರಕೃತಿ ವಿಕೋಪದ ಮಾಹಿತಿಗಳನ್ನು ಸಾರ್ವಜನಿಕರಿಗೆ ನೀಡಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ

ಉಡುಪಿ: ಜಿಲ್ಲೆಯಲ್ಲಿ ಸಂಭವನೀಯ ಪ್ರಕೃತಿ ವಿಕೋಪದ ಬಗ್ಗೆ ಹವಾಮಾನ ಇಲಾಖೆಯಿಂದ ನೀಡುವ ಮಾಹಿತಿಗಳನ್ನು ಸಾರ್ವಜನಿಕರಿಗೆ ತಲುಪಿಸಿ, ಅವುಗಳಿಂದ ರಕ್ಷಣೆ ಪಡೆಯುವ ಹಾಗೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪ್ರಸ್ತುತ ಜಿಲ್ಲೆಯಲ್ಲಿ ಬಿಸಿ ಶಾಖದ ಮಾರುತಗಳು ಬೀಸುತ್ತವೆ ಎಂಬ ಬಗ್ಗೆ ಹವಾಮಾನ ಇಲಾಖೆ ವರದಿ ನೀಡಿದೆ. ಈ […]