ರಾಜ್ಯಮಟ್ಟದ ಕಡಲತೀರ ಚಾರಣ, ಪ್ರಕೃತಿ ಅಧ್ಯಯನ ಮತ್ತು ಸ್ವಚ್ಛತಾ ಶಿಬಿರದ ಸಮಾರೋಪ.

ಉಡುಪಿ: ಜೀವಿತಾವಧಿಯಲ್ಲಿ ನಾವುಗಳು ಎಲ್ಲಿ ಹೋದರೂ ಕೂಡ ಅಲ್ಲಿನ ವಾತಾವರಣಕ್ಕೆ ಅನುಗುಣವಾಗಿ ಬದುಕಬೇಕಾಗುತ್ತದೆ. ನೂರಾರು ವರ್ಷಗಳ ಇತಿಹಾಸವಿರುವ ಭಾರತ್ ಸೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಇದಕ್ಕೆ ಬೇಕಾದ ತರಬೇತಿ ಜತೆಗೆ ಮಾಹಿತಿಯನ್ನು ನೀಡುತ್ತದೆ. ರಾಷ್ಟ್ರ ಪ್ರೇಮವಿರುವ ಯುವಜನರಿಗೆ ಅಲ್ಲಲ್ಲಿ ಶಿಬಿರಗಳನ್ನು ಆಯೋಜಿಸಿ ಆ ಮೂಲಕ ಒಳ್ಳೆಯ ವಿಚಾರಗಳನ್ನು ಹಾಗೂ ಜೀವನಾನುಭವಗಳನ್ನು ಕಲಿಸುತ್ತದೆ ಎಂದು ಭಾರತ್ ಸೌಟ್ಸ್ ಮತ್ತು ಗೈಡ್ಸ್ ಉಡುಪಿ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ್ ಶೆಟ್ಟಿ ಹೇಳಿದರು. ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ಸಭಾಭವನದಲ್ಲಿ ಶನಿವಾರ […]