ಉಡುಪಿ ಜಿಲ್ಲಾ ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅಧಿಕಾರ ಸ್ವೀಕಾರ

ಉಡುಪಿ: ಉಡುಪಿ ಜಿಲ್ಲೆಯ ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅವರು ಅಧಿಕಾರ ಸ್ವೀಕಾರ ಮಾಡಿದರು.ಬನ್ನಂಜೆ ಎಸ್ಪಿ ಕಚೇರಿಯಲ್ಲಿ ನಿರ್ಗಮಿತ ಎಸ್ಪಿ ಡಾ. ಅರುಣ್ ಕುಮಾರ್ ಅವರು ನೂತನ ಎಸ್ಪಿಗೆ ಅಧಿಕಾರ ಹಸ್ತಾಂತರಿಸಿದರು. ಈ ಮೊದಲು ಹರಿರಾಮ್ ಶಂಕರ್ ಅವರು ರಾಜ್ಯ ಇಂಟಲಿಜೆನ್ಸ್ ಎಸ್ಪಿಯಾಗಿದ್ದರು. ಡಾ. ಅರುಣ್ ಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಎಸ್ಪಿ ಹರಿರಾಮ್ ಶಂಕರ್ ಅವರು, ಉಡುಪಿ ಜಿಲ್ಲೆಯ ಜನತೆ ಕೋಮು ಪ್ರಚೋದನೆಗೆ ಅವಕಾಶ […]