ಅಗಸರು, ಕ್ಷೌರಿಕರು ಪರಿಹಾರಕ್ಕೆ ಅರ್ಜಿ ಸಲ್ಲಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ ಜೂನ್ 16: ಕೋವಿಡ್ 19 ಕಾರಣ ಲಾಕ್ ಡೌನ್ ಜಾರಿಗೊಳಿಸಿದ ಹಿನ್ನಲೆಯಲ್ಲಿ , ರಾಜ್ಯ ಸರ್ಕಾರದಿಂದ , ಅಗಸರು ಮತ್ತು ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ಒಂದು ಬಾರಿಯ ಪರಿಹಾರವಾಗಿ ರೂ.5000 ನೆರವನ್ನು ಪಡೆಯುವ ಕುರಿತಂತೆ, ಜೂನ್ 30 ರೊಳಗೆ ಜಿಲ್ಲೆಯಲ್ಲಿನ ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಅಗಸ ಮತ್ತು ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವವರು ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಬುಧವಾರ, ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. […]

ಸ್ವಂತ ರಾಜ್ಯಕ್ಕೆ ತೆರಳುವ ವಲಸೆ ಕಾರ್ಮಿಕರು ಸಂಪರ್ಕಿಸಿ: ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ ಜೂನ್ 12: ಕೊರೋನಾ ವೈರಸ್ ಕಾಯಿಲೆ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೊರಡಿಸಲಾಗಿರುವ ಲಾಕ್‌ಡೌನ್‌ನಿಂದಾಗಿ ಉಡುಪಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಉಳಿದಿರುವ ಹೊರ ರಾಜ್ಯಗಳ ವಲಸೆ ಕಾಮಿಕರನ್ನು ಈಗಾಗಲೇ ಅವರ ಸ್ವಂತ ಊರುಗಳಿಗೆ ಜಿಲ್ಲಾಡಳತದಿಂದ ಟ್ರೆನ್, ಬಸ್ಸು ಮೂಲಕ ಈಗಾಗಲೇ ಕಳುಹಿಸಿಕೊಡಲಾಗಿದೆ. ಇನ್ನೂ ಕೂಡ ಜಿಲ್ಲೆಯಲ್ಲಿ ಹೊರ ರಾಜ್ಯದ ವಲಸೆ  ಕಾರ್ಮಿಕರು ಅವರ ಸ್ವಂತ ಊರಿಗೆ ಹೋಗಲು ಬಾಕಿಯಾಗಿದ್ದಲ್ಲಿ, ಅಂತಹ ವಲಸೆ ಕಾರ್ಮಿಕರು ಅವರ ಸ್ವಂತ ರಾಜ್ಯಕ್ಕೆ ಹೋಗಲು ಇಚ್ಛಿಸಿದ್ದಲ್ಲಿ , ದೂರವಾಣಿ ಸಂಖ್ಯೆ (0820-2571500) ಕರೆ […]

ರಾಜ್ಯದ ಮೊದಲ ಖಾಸಗಿ ಕೋವಿಡ್ 19 ಆಸ್ಪತ್ರೆಯಾಗಿ‌ ಉಡುಪಿಯ ಡಾ. ಟಿ.ಎಂ.ಎ. ಪೈ ಆಸ್ಪತ್ರೆ ಕಾರ್ಯಾರಂಭ

ಉಡುಪಿ: ಉಡುಪಿಯ ಡಾ. ಟಿ.ಎಂ.ಎ. ಪೈ ಆಸ್ಪತ್ರೆಯು ರಾಜ್ಯದ ಮೊದಲ ಖಾಸಗಿ ಕೋವಿಡ್ 19 ಆಸ್ಪತ್ರೆಯಾಗಿ‌ ಬುಧವಾರ ಕಾರ್ಯಾರಂಭಿಸಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಮಣಿಪಾಲ‌ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಕೊರೊನಾ‌ ಸೋಂಕಿತರನ್ನು ಇದೀಗ ಡಾ. ಟಿಎಂಎ ಪೈ ಆಸ್ಪತ್ರೆಗೆ ಸ್ಥಳಾಂತರಿಸಿ‌ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.