ಕೊರೊನಾ ಲಕ್ಷಣದಿಂದ ಬಳಲುತ್ತಿದ್ದ ಬನ್ನಂಜೆ ನಿವಾಸಿ ಸಾವು: ವರದಿಗಾಗಿ ಕಾಯುತ್ತಿರುವ ಜಿಲ್ಲಾಡಳಿತ 

ಉಡುಪಿ: ಶೀತ, ಕೆಮ್ಮು ಹಾಗೂ ಜ್ವರದಿಂದ ಬಳಲುತ್ತಿದ್ದ ಉಡುಪಿ ಬನ್ನಂಜೆ ವಾರ್ಡ್ ನ 44 ವರ್ಷದ ವ್ಯಕ್ತಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಮೃತ ವ್ಯಕ್ತಿಯ ಗಂಟಲಿನ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ. ಈ ವ್ಯಕ್ತಿಯು ಕಳೆದ ಮೂರು ದಿನಗಳಿಂದ ಶೀತ, ಜ್ವರ, ಕೆಮ್ಮುವಿನಿಂದ ಬಳಲುತ್ತಿದ್ದು, ಜಿಲ್ಲಾಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಾಪ್ಪಿದ್ದಾರೆ. ಈ ನಿಟ್ಟಿನಲ್ಲಿ ವ್ಯಕ್ತಿಯ ಕೊರೊನಾ ಪರೀಕ್ಷೆಯ ವರದಿಗಾಗಿ ಜಿಲ್ಲಾಡಳಿತ ಕಾಯುತ್ತಿದೆ.