ಅನಾಥ ರೋಗಿಗಳ ಆರೈಕೆಗೆ ಅನಾಥಾಶ್ರಮ-ಉಡುಪಿ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್

ಉಡುಪಿ: ಜಿಲ್ಲೆಯ ಜಿಲ್ಲಾಸ್ಪತ್ರೆಗಳಲ್ಲಿ ದಾಖಲಾಗುವ ಅನಾಥ ರೋಗಿಗಳ ಆರೈಕೆಗಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಹಯೋಗದಲ್ಲಿ ಅನಾಥಾಲಯ ಆರಂಭಿಸುವ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್ ಸೂಚಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಆಸ್ಪತ್ರೆಗೆ ಸಮಾಜಸೇವಕರು ಮತ್ತು ಸಾರ್ವಜನಿಕರು ಅನಾಥ ರೋಗಿಗಳನ್ನು ದಾಖಲಿಸುತ್ತಿದ್ದು, ಇವರಿಗೆ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಥಳಾವಕಾಶದ ಕೊರತೆ ಇರುವ ಬಗ್ಗೆ ಜಿಲ್ಲಾ ಸರ್ಜನ್ ಡಾ. […]