ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯ ಮನೆಯವರೆಗೆ ಕೊರೊನಾ ಪಾಸಿಟಿವ್: ಜಿಲ್ಲೆಯಲ್ಲಿ ಹೆಚ್ಚಿದ ಆತಂಕ

ಉಡುಪಿ: ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯೊಬ್ಬಳ ಮನೆಯವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇದು ಜಿಲ್ಲೆಯಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಪಡುಬಿದ್ರಿಯ ಪರೀಕ್ಷಾ ಕೇಂದ್ರವೊಂದರಲ್ಲಿ ಶನಿವಾರ ಈ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದಳು. ಅಂದೇ ಆಕೆಯ ಮನೆಯವರಿಗೆ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯ ಗಂಟಲಿನ ದ್ರವದ ಮಾದರಿಯನ್ನು ಕೊರೊನಾ ಪರೀಕ್ಷೆಗೆ ಕಳುಹಿಸಲಾಗಿದ್ದು, ಜೂನ್ 29ರೊಳಗೆ ಪರೀಕ್ಷಾ ವರದಿ ಬಾರದಿದ್ದರೆ ಆಕೆ, ಅಂದಿನ ಪರೀಕ್ಷೆ ಬರೆಯುವುದರಿಂದ ವಂಚಿತವಾಗುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ. ವಿದ್ಯಾರ್ಥಿನಿಯ ವರದಿ ನೆಗೆಟಿವ್ ಬಂದರೂ […]