ಜಿಲ್ಲಾಧಿಕಾರಿ ಸೂಚನೆ ಮೇರೆಗೆ ತೂಕ ಮತ್ತು ಅಳತೆ ಅಧಿಕಾರಿಗಳಿಂದ ದಿಡೀರ್ ತಪಾಸಣೆ: 3 ಮೊಕದ್ದಮೆ ದಾಖಲು

ಉಡುಪಿ ಏ.3: ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಸೂಚನೆ ಮೇರೆಗೆ,  ಉಡುಪಿ ನಗರದಲ್ಲಿನ  ತರಕಾರಿ ಮಾರುಕಟ್ಟೆಯ  ಅಂಗಡಿಗಳು, ಕೋಳಿ ಮತ್ತು ಕುರಿ ಮಾಂಸದ ಅಂಗಡಿ ಮತ್ತು ದಿನಸಿ ಅಂಗಡಿಗಳಿಗೆ ಶುಕ್ರವಾರ  ದಿಡೀರ್  ಭೇಟಿ ನೀಡಿದ, ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿಗಳು, ಕಡಿಮೆ ತೂಕ ನೀಡುತ್ತಿದ್ದವರ ಮೇಲೆ ಎರಡು ಮೊಕದ್ದಮೆ  ಹಾಗೂ  ದಿನಸಿ ಅಂಗಡಿಗಳ ತಪಾಸಣೆ ಮಾಡಿ ಎಂ.ಆರ್.ಪಿ ದರದ ಬಗ್ಗೆ ಒಂದು ಮೊಕದ್ದಮೆ ದಾಖಲಿಸಿ , ಒಟ್ಟು 3 ಪ್ರಕರಣಗಳಲ್ಲಿ 8000 ರೂ ದಂಡ ವಸೂಲಿ ಮಾಡಿದ್ದಾರೆ. […]

ಅಂಬಲಪಾಡಿ: ವಿದ್ಯಾಪೋಷಕ್‌ ವಿದ್ಯಾರ್ಥಿಗಳ ಸನಿವಾಸ ಶಿಬಿರದ ಸಮಾರೋಪ ಸಮಾರಂಭ

ಉಡುಪಿ: ವಿದ್ಯಾರ್ಥಿಗಳು ನಮ್ಮ ಸಂಸ್ಕೃತಿ, ಸಂಸ್ಕಾರದ ಜತೆಗೆ ಸಾತ್ವಿಕ ಆಹಾರ ಪದ್ಧತಿಯನ್ನು ಅಳವಡಿಸಿಕೊಂಡಲ್ಲಿ, ರೋಗಗಳಿಂದ ದೂರವಿರಲು ಸಾಧ್ಯವಿದೆ ಎಂದು ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ.ಬೀ. ವಿಜಯ ಬಲ್ಲಾಳ್‌ ಹೇಳಿದರು. ಯಕ್ಷಗಾನ ಕಲಾರಂಗದ ವತಿಯಿಂದ ಅಂಬಲಪಾಡಿ ದೇಗುಲದ ಭವಾನಿ ಮಂಟಪದಲ್ಲಿ ಬುಧವಾರ ನಡೆದ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್‌ ವಿದ್ಯಾರ್ಥಿಗಳ ಸನಿವಾಸ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೈಹಿಕ ಆರೋಗ್ಯ ಹಾಗೂ ಪರಿಸರ ಸ್ವಚ್ಛತೆಗೆ ಹೆಚ್ಚಿನ ಗಮನಕೊಡಬೇಕು. ಮಕ್ಕಳು ಋಣಾತ್ಮಕ ವಿಷಯಗಳಿಂದ […]