ಉಡುಪಿ: ಡಿ.28ರಿಂದ ಜಿಲ್ಲೆಯಲ್ಲಿ ನೈಟ್‌ಕರ್ಫ್ಯೂ ಜಾರಿ; ಸಾರ್ವಜನಿಕರ ಓಡಾಟಕ್ಕೆ ಸಂಪೂರ್ಣ ನಿರ್ಬಂಧ
ಉಡುಪಿ: ಓಮಿಕ್ರಾನ್ ನಿಯಂತ್ರಣ ಕುರಿತಂತೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ನೈಟ್‌ಕರ್ಫ್ಯೂ ಮತ್ತು ಹೊಸ ವರ್ಷಾಚರಣೆ ಕುರಿತ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಆನುಷ್ಠಾನಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲೆಯಾದ್ಯಂತ ಡಿಸೆಂಬರ್ 28 ರಿಂದ ಜನವರಿ 7 ರ ವರಗೆ, ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್‌ಕರ್ಫ್ಯೂ ಜಾರಿಗೊಳಿಸಲಾಗುತ್ತಿದ್ದು, ಈ ಅವಧಿಯಲ್ಲಿ ಅಗತ್ಯ ಚಟುವಟಿಕೆ ಹೊರತುಪಡಿಸಿ ಸಾರ್ವಜನಿಕರ ಓಡಾಟವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ವೈದ್ಯಕೀಯ […]