ಉಡುಪಿ: ಮೆಹಂದಿ ಕಾರ್ಯಕ್ರಮಕ್ಕೆ ಅನುಮತಿಯಿಲ್ಲ; ಆಯೋಜಿಸಿದರೆ ಕ್ರಿಮಿನಲ್ ಪ್ರಕರಣ ದಾಖಲು: ಡಿಸಿ ಜಿ. ಜಗದೀಶ್ ಎಚ್ಚರಿಕೆ

ಉಡುಪಿ: ಜಿಲ್ಲೆಯಲ್ಲಿ ಮೆಹಂದಿ ಕಾರ್ಯಕ್ರಮಗಳನ್ನು ನಡೆಸಲು ಯಾವುದೇ ಅನುಮತಿಯನ್ನು ನೀಡಿರುವುದಿಲ್ಲ. ಮೆಹಂದಿ ಕಾರ್ಯಕ್ರಮಗಳನ್ನು ನಡೆಸಿದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸುವ ವಿಡಿಯೋ ಮತ್ತು ಫೋಟೋಗ್ರಾಫರ್ ಗಳ ವಿರುದ್ಧ ಕೂಡ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.