ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಸಾಗರ ಪರಿಕ್ರಮ ಕಾರ್ಯಕ್ರಮ

ಉಡುಪಿ: ಮೀನುಗಾರರ ಸರ್ವತೋಮುಖ ಕಲ್ಯಾಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಆಯೋಜಿಸಲಾಗಿರುವ ಸಾಗರ ಪರಿಕ್ರಮ (ಹಂತ-4) ಮೀನುಗಾರರೊಂದಿಗೆ ಸಂವಾದ ಕಾರ್ಯಕ್ರಮವು ಮಾರ್ಚ್ 19 ರಂದು ಬೆಳಗ್ಗೆ 10 ಗಂಟೆಗೆ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ನಡೆಯಲಿದೆ. ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಪುರಷೋತ್ತಮ ರೂಪಾಲಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವ ಡಾ. ಸಂಜೀವ ಕುಮಾರ್ ಬಲ್ಯಾನ್, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ […]