ಉಡುಪಿ: ಲಾಕ್ ಡೌನ್ ಅವಧಿಯಲ್ಲಿ ಬೇಕರಿಗಳಿಗೂ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ನೀಡಿ; ಆಗ್ರಹ

ಉಡುಪಿ: ಕೋವಿಡ್ ಲಾಕ್ ಡೌನ್ ನಿಂದ ಇತರ ವಲಯಗಳಂತೆ ಬೇಕರಿ ಉತ್ಪನ್ನ ಮಾರಾಟಗಾರರು‌ ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಬೆಳಿಗ್ಗೆ 6ರಿಂದ 10 ಗಂಟೆಯವರೆಗೆ ಬೇಕರಿ ಉತ್ಪನ್ನಗಳನ್ನು ಮಾರಾಟ ಮಾಡಲು ಬೇಕರಿಗಳಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಸು ತಯಾರಿಕಾ ಹಾಗೂ ಮಾರಾಟ ಸಂಘವು‌ ಉಡುಪಿ ಜಿಲ್ಲಾಧಿಕಾರಿಗಳಿಗೆ ಇಂದು ಮನವಿ ಸಲ್ಲಿಸಿದೆ. ಜಿಲ್ಲೆಯಲ್ಲಿ 1,500ಕ್ಕೂ ಅಧಿಕ ಬೇಕರಿ ಉತ್ಪನ್ನ ಮಾರಾಟ ಮಾಡುವ ಅಂಗಡಿಗಳಿವೆ. ಹಾಗೆ, ಸುಮಾರು 75ಕ್ಕೂ ಹೆಚ್ಚು ಬೇಕರಿ ಉತ್ಪನ್ನಗಳನ್ನು ಉತ್ಪಾದಿಸುವ […]