ಉಡುಪಿಯ ಪಾರಂಪರಿಕ ಕಟ್ಟಡ ನೆಲಸಮಕ್ಕೆ ಕ್ಷಣಗಣನೆ

ಉಡುಪಿ ನಗರದ ಐತಿಹಾಸಿಕ ಕಟ್ಟಡಗಳಲ್ಲಿ ಒಂದಾದ, ಸ್ವಾತಂತ್ರ್ಯ ಪೂರ್ವದಲ್ಲಿ ಸಬ್ ಜೈಲ್ ಆಗಿದ್ದ, ಹಳೆ ತಾಲೂಕು ಕಚೇರಿ ಕಟ್ಟಡ ನೆಲಸಮಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಬ್ರಿಟಿಷರ ಆಳ್ವಿಕೆ ಇದ್ದ 1906ರಲ್ಲಿ ನಿರ್ಮಾಣವಾಗಿದ್ದ ಈ ಕಟ್ಟಡವನ್ನು ಪಾರಂಪರಿಕ ಕಟ್ಟಡ ಮಾನ್ಯತೆಯೊಂದಿಗೆ ಉಳಿಸಲು ನಡೆಸಿದ ಪ್ರಯತ್ನಗಳು ವಿಫಲವಾಗಿವೆ. ಇದೀಗ ಕಟ್ಟಡವನ್ನು ನೆಲಸಮಗೊಳಿಸುವ ನಿಟ್ಟಿನಲ್ಲಿ ಅದರ ಹೆಂಚುಗಳನ್ನು ತೆಗೆಯುವ ಕಾರ್ಯ ಆರಂಭಗೊಂಡಿದೆ. ಈ ಜಾಗದಲ್ಲಿ ಇನ್ನು ನಗರಸಭೆಯ ಹೊಸ ಕಟ್ಟಡ ನಿರ್ಮಾಣವಾಗಲಿದೆ. ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿ ಉಡುಪಿ ನಗರದಲ್ಲಿರುವ ವಿರಳ ಪಾರಂಪರಿಕ ಕಟ್ಟಡಗಳಲ್ಲಿ […]