ಉದ್ಘಾಟನೆ ಭಾಗ್ಯವಿಲ್ಲದೆ ಅನಾಥ ಸ್ಥಿತಿಯಲ್ಲಿದೆ ಬೀಡಿನಗುಡ್ಡೆಯ ಅನಿಲ ಚಿತಾಗಾರ.!

ಉಡುಪಿ: ನಗರದ ಬೀಡಿನಗುಡ್ಡೆಯ ಹಿಂದೂ ರುದ್ರಭೂಮಿ ಬಳಿ ಉಡುಪಿ ನಗರಸಭೆ ಒಂದು ಕೋಟಿಗೂ ಅಧಿಕ ವೆಚ್ಚದಲ್ಲಿ ಪರಿಸರ ಸ್ನೇಹಿಯಾಗಿರುವ ಅನಿಲ ಚಿತಾಗಾರವನ್ನು ನಿರ್ಮಿಸಿದೆ. ಸಿದ್ಧಗೊಂಡು ಹಲವು ಸಮಯ ಕಳೆದರೂ ಅನಿಲ ಚಿತಾಗಾರವು ಇನ್ನೂ ಉದ್ಘಾಟನೆ ಭಾಗ್ಯ ಪಡೆಯದೆ ಅನಾಥ ಸ್ಥಿತಿಯಲ್ಲಿದ್ದು, ತಕ್ಷಣ ಲೋಕಾರ್ಪಣೆಗೊಳಿಸುವಂತೆ ಸಾರ್ವಜನಿಕ ವಲಯದಿಂದ ಆಗ್ರಹ ಕೇಳಿಬಂದಿದೆ. ತಂತ್ರಜ್ಞಾನ ಮುಂದುವರಿದರೂ ಇನ್ನೂ ಬೀಡಿನಗುಡ್ಡೆಯ ಹಿಂದೂ ರುದ್ರಭೂಮಿಯಲ್ಲಿ ಕಟ್ಟಿಗೆಗಳನ್ನು ಬಳಸಿಕೊಂಡು ಸಾಂಪ್ರದಾಯಿಕ ಪದ್ಧತಿಯಂತೆ ಅಂತ್ಯಸಂಸ್ಕಾರಗಳು ನಡೆಯುತ್ತಿವೆ. ಈ ಪದ್ಧತಿಯಿಂದ ಮರಗಳ ವಿನಾಶ ಹಾಗೂ ಶವ ದಹನದಿಂದಾಗುವ ಹೊಗೆ, […]