ಉಡುಪಿ: ಕ್ರೈಸ್ತ ಬಾಂಧವರಿಂದ ಸರಳವಾಗಿ ಪಾಮ್ ಸಂಡೆ ಆಚರಣೆ
ಉಡುಪಿ: ಕೊರೊನಾ ಎರಡನೇ ಅಲೆಯ ಆತಂಕದ ನಡುವೆ ಯೇಸು ಸ್ವಾಮಿ ಜೆರುಸಲೇಂ ನಗರವನ್ನು ಪ್ರವೇಶಿಸಿದ ಸಂಕೇತವಾಗಿ ಆಚರಿಸುವ ಗರಿಗಳ ಭಾನುವಾರ (ಪಾಮ್ ಸಂಡೆ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಸರಳವಾಗಿ ಆಚರಿಸಿದರು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ನಿತ್ಯ ಸಹಾಯ ಮಾತೆಯ ಇಗರ್ಜಿ ಕಳತ್ತೂರು ಇಲ್ಲಿ ನಡೆದ ಧಾರ್ಮಿಕ ವಿಧಿವಿಧಾನದಲ್ಲಿ ಭಾಗವಹಿಸಿದರು. ಈ ವೇಳೆ ಚರ್ಚ್‌ನ ಪ್ರಧಾನ ಧರ್ಮಗುರು ಲೊರೇನ್ಸ್ ಬಿ. ಡಿಸೋಜಾ ಮತ್ತು ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ […]