ಇಂದು (ಫೆ.1)ರಂದು ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನದ ನೂತನ ರಥ ಸಮರ್ಪಣೆ ಕಾರ್ಯಕ್ರಮ

ಉಡುಪಿ: ಉಡುಪಿ ಪುತ್ತಿಗೆ ಮಠದ ಅಧೀನದಲ್ಲಿರುವ ಪಣಿಯಾಡಿ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಇಂದು ನೂತನ ರಥ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು ಪುತ್ತಿಗೆ ಮಠದ ದಿವಾನ್ ನಾಗರಾಜ ಆಚಾರ್ಯ ತಿಳಿಸಿದ್ದಾರೆ. ಉಡುಪಿ ಶ್ರೀಕೃಷ್ಣಮಠದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ 4ಗಂಟೆಗೆ ಕೃಷ್ಣಮಠದಿಂದ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನದವರೆಗೆ ಶೋಭಾಯಾತ್ರೆ ನಡೆಯಲಿದ್ದು, ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥರು ಚಾಲನೆ ನೀಡಲಿದ್ದಾರೆ. ಕಿರಿಯ ಶ್ರೀ ಸುಶ್ರೀಂದ್ರತೀರ್ಥರು ಉಪಸ್ಥಿತರಿರುವರು ಎಂದರು. ಸಂಜೆ 6ಗಂಟೆಗೆ ನಡೆಯುವ […]