ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ; ಅಪಾರ್ಟ್ ಮೆಂಟ್ ನ ಗೋಡೆಗಳು ಛಿದ್ರ

ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ಲೀಕ್ ಆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೂರು ಅಂತಸ್ತಿನ ಅಪಾರ್ಟ್ ಮೆಂಟ್ ನ ಮೂರನೇ ಮಹಡಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು ಪಾರ್ಟಿ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ […]