ಉಡುಪಿಯಲ್ಲಿ ಇಲ್ಲಿಯವರೆಗೂ ಯಾವ ಶಾಸಕರು ದ್ವೇಷದ ರಾಜಕಾರಣ ಮಾಡಿಲ್ಲ; ಶಾಸಕ ಯಶ್ ಪಾಲ್ ವಿರುದ್ಧ ರಘುಪತಿ ಭಟ್ ಗರಂ

ಉಡುಪಿ: ಉಡುಪಿಯಲ್ಲಿ ಇಲ್ಲಿಯವರೆಗೂ ಯಾವ ಶಾಸಕರು ದ್ವೇಷದ ರಾಜಕಾರಣ ಮಾಡಿಲ್ಲ. ಕಾಂಗ್ರೆಸ್ ಶಾಸಕರಾಗಿದ್ದ ಯು.ಆರ್.ಸಭಾಪತಿ, ಪ್ರಮೋದ್ ಮಧ್ವರಾಜ್ ಅವರನ್ನು ರಾಜಕೀಯವಾಗಿ ಎದುರಿಸಿಕೊಂಡು ಬಂದಿದ್ದೇನೆ. ನಾವೆಲ್ಲ ರಾಜಕೀಯವಾಗಿ ಜಗಳ ಮಾಡುತ್ತಿದ್ದೆವು. ಆದರೆ ನಾವು ಯಾರೂ ವೈಯಕ್ತಿಕವಾಗಿ ನಿಂದನೆ ಹಾಗೂ ವ್ಯವಹಾರಕ್ಕೆ ತೊಂದರೆ ಮಾಡುತ್ತಿರಲಿಲ್ಲ ಎಂದು ಮಾಜಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಶಾಸಕರು ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಇರುವುದರ ಬಗ್ಗೆ ನೂರಕ್ಕೆ ನೂರರಷ್ಟು ಬೇಸರವಿದೆ. ಅವರ ದ್ವೇಷದ ರಾಜಕಾರಣ […]