ಉಡುಪಿ: ಪೊಲೀಸ್ ವಸತಿ ಗೃಹದಲ್ಲಿ ಕಳ್ಳತನ

ಉಡುಪಿ: ಡಿಎಆರ್ ಪೊಲೀಸ್ ವಸತಿ ಗೃಹಕ್ಕೆ ಸೋಮವಾರ ನಸುಕಿನ ವೇಳೆ ನುಗ್ಗಿದ ಕಳ್ಳರು ಕೆಲವು ಸೊತ್ತುಗಳನ್ನು ಕಳವು ಮಾಡಿದ್ದಾರೆ. ಉಡುಪಿ ನಗರದ ಚಂದು ಮೈದಾನದ ಬಳಿ ಇರುವ ಡಿಎಆರ್ ಪೊಲೀಸ್ ವಸತಿ ಗೃಹದಲ್ಲಿ ಕಳ್ಳತನ ನಡೆದಿದೆ. ಇಲ್ಲಿನ ಮೂರು ವಸತಿ ಸಮುಚ್ಚಯದಲ್ಲಿ ಒಟ್ಟು 28 ಮನೆಗಳಿದ್ದು, ಇದರಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಯಾದ ರಾಘವೇಂದ್ರ ಹಾಗೂ ರವಿರಾಜ್ ಎಂಬವರ ಮನೆಯ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ಕಪಾಟಿನ ಬೀಗ ತೆರೆದು ಸೊತ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿರುವುದು ಕಂಡುಬಂದಿದೆ. […]