ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ವತಿಯಿಂದ ನೂತನ ಗ್ರಾಪಂ ಸದಸ್ಯರಿಗೆ ಸನ್ಮಾನ

ಉಡುಪಿ: ಗ್ರಾಮ ಪಂಚಾಯಿತಿ ಸದಸ್ಯರು ಅಸಾಹಯಕರಿಗೆ ತಮ್ಮ ಸೇವೆಯಲ್ಲಿ ಮೊದಲ ಆದತ್ಯೆ ನೀಡುವಂತಾಗಬೇಕು. ಈ ಮೂಲಕ ಬಡವರ ಬಾಳಿಗೆ ಬೆಳಕಾಗಬೇಕು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಅವರು ಭಾನುವಾರ ಉಡುಪಿ ಶೋಕಮಾತಾ ಇಗರ್ಜಿಯ ಸಭಾಂಗಣದಲ್ಲಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಆಶ್ರಯದಲ್ಲಿ ಉಡುಪಿ ಧರ್ಮಪ್ರಾಂತ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದ ಮತ್ತು ವಿಜೇತ ಕ್ರೈಸ್ತ  ಅಭ್ಯರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದರು. ಸೇವೆ ಎನ್ನುವುದು ಕ್ರೈಸ್ತ ಸಮುದಾಯದ ಪ್ರಮುಖ ಧ್ಯೇಯವಾಗಿದ್ದು, ಗ್ರಾಪಂ […]