ಉಡುಪಿ:ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಉಡುಪಿ: ಉಡುಪಿ ನಗರಸಭೆಯ ವತಿಯಿಂದ ಪೌರಕಾರ್ಮಿಕರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಇತ್ತೀಚೆಗೆ ನಗರಸಭೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕಳೆದ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಪೌರಕಾರ್ಮಿಕರಾದ ಬದ್ದು ನಾಯ್ಕ್ ಮತ್ತು ಗೀತಾ ಬಾಯಿ ಹಾಗೂ ಕಂಡ್ಯಾ ನಾಯ್ಕ್ ಮತ್ತು ವೇದಾವತಿ ದಂಪತಿಗಳ ಮಕ್ಕಳಾದ ಬಿ.ಎಸ್ ಸುನೀತಾ ಕುಮಾರಿ ಮತ್ತು ವಿಷ್ಣು ನಾಯ್ಕ್ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ, ಪೌರಾಯುಕ್ತ […]