ಉಡುಪಿ: ಕೊರೊನಾ ಲಸಿಕೆ ಸಂಗ್ರಹಕ್ಕೆ ಕೊಠಡಿ ಸಿದ್ಧ

ಉಡುಪಿ: ಕೋವಿಡ್-19 ಮಹಾಮಾರಿಗೆ ಕಡಿವಾಣ ಹಾಕಲು ವಿಶ್ವದ ಅನೇಕ ದೇಶಗಳಲ್ಲಿ ಲಸಿಕೆ ಪ್ರಯೋಗಗಳು ನಡೆಯುತ್ತಿವೆ. ವಿಶ್ವ ಆರೋಗ್ಯ ಸಂಸ್ಥೆ ಸಹ ಕೊರೊನಾ ಲಸಿಕೆ ಪ್ರಯೋಗದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದೆ. ಸದ್ಯ ಲಸಿಕೆಯ ಅಂತಿಮ ಸಿದ್ದತೆಯಲ್ಲಿದ್ದು, ಶೀಘ್ರದಲ್ಲಿ ವಿಶ್ವದಾದ್ಯಂತ ಆರಂಭಿಕ ಲಸಿಕೆ ನೀಡುವ ಕಾರ್ಯಕ್ರಮ ಆರಂಭಗೊಳ್ಳಲಿದೆ. ಈ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಸಂಗ್ರಹ ಮಾಡಲು ಅಗತ್ಯವಿರುವ ಲಸಿಕಾ ಕೊಠಡಿ (ವಾಕ್ ಇನ್ ಕೂಲರ್)ಯನ್ನು ಸಂಪೂರ್ಣ ಸಿದ್ಧಗೊಳಿಸಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಸಿದ್ಧಗೊಂಡಿರುವ […]