ಉಡುಪಿ: ಡಿ.27-28 ರಂದು ಸಿಎ ವಿದ್ಯಾರ್ಥಿಗಳ ಸಮ್ಮೇಳನ

ಉಡುಪಿ: ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಯ (ಐಸಿಎಐ) ಉಡುಪಿ ಶಾಖೆಯ ಆಶ್ರಯದಲ್ಲಿ “ಲೆಕ್ಕಪರಿಶೋಧನ ವಿದ್ಯಾರ್ಥಿಗಳಿಗಾಗಿ ಸಮ್ಮೇಳನ”ವನ್ನು ಇದೇ ಡಿ.27 ಮತ್ತು 28ರಂದು ಅಮ್ಮಣ್ಣಿ ರಾಮಣ್ಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಐಸಿಎಐ ಉಡುಪಿ ಶಾಖೆಯ ಅಧ್ಯಕ್ಷ ಕಿರಣ್ ಕುಮಾರ್ ಎಚ್. ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಮೆಗಾ ಸಮ್ಮೇಳನದಲ್ಲಿ ದಕ್ಷಿಣ ಭಾರತದ ಸುಮಾರು 600 ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ. ಐಸಿಎಐ ಉಪಾಧ್ಯಕ್ಷ ಚರಣ್ ಜೊತ್ ಸಿಂಗ್ ನಂದಾ ಉದ್ಘಾಟಿಸಲಿದ್ದಾರೆ. ಆ ಬಳಿಕ ಟ್ಯಾಕ್ಸೇಶನ್, ಜಿಎಸ್‌ಟಿ […]