ಉಡುಪಿ: ಖಾಸಗಿ ಆಸ್ಪತ್ರೆಗಳು ಕೋವಿಡ್ ಲಕ್ಷಣಗಳನ್ನು ಹೊಂದಿರುವವರನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಬೇಕು; ಡಿಸಿ ಜಗದೀಶ್ ಸೂಚನೆ
ಉಡುಪಿ: ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಜ್ವರ, ಶೀತ, ಕೆಮ್ಮು ಲಕ್ಷಣಗಳನ್ನು ಹೊಂದಿರುವವರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್ ಪರೀಕ್ಷೆಯನ್ನು ಹೆಚ್ಚುಗೊಳಿಸಲಾಗಿದ್ದು, ಸ್ವಾಬ್ ಸಂಗ್ರಹಿಸಿದ 24 ಗಂಟೆಯೊಳಗೆ ವರದಿ ನೀಡಲು ಕ್ರಮಕೈಗೊಳ್ಳಬೇಕು. ಲ್ಯಾಬ್ ನಲ್ಲಿ ಪರೀಕ್ಷಾ ವರದಿ ನೀಡಲು ವಿಳಂಬವಾದಲ್ಲಿ, ಪಕ್ಕದ ಜಿಲ್ಲೆಗಳಿಗೆ ಸ್ವಾಬ್ ಕಳುಹಿಸಿ ನಿಗದಿತ ಅವಧಿಯೊಳಗೆ ವರದಿ ಪಡೆಯುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರ ಪ್ರದೇಶದಲ್ಲಿ ಪಾಸಿಟಿವ್ ಬಂದ ವ್ಯಕ್ತಿಯು ವಾಸಿಸುವ 100ಮೀ ಪ್ರದೇಶದಲ್ಲಿ ಹಾಗೂ […]