ಉಡುಪಿಯಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಂದ ಪ್ರತಿಭಟನೆ

ಉಡುಪಿ: ಕೇಂದ್ರ ಸರ್ಕಾರವು ಲೈಂಗಿಕ ಅಲ್ಪಸಂಖ್ಯಾತರ ವ್ಯಕ್ತಿಗಳ ಹಕ್ಕುಗಳ ರಕ್ಷಣೆ ಮಸೂದೆ 2018 ಅನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ಆಶ್ರಯ ಸಮುದಾಯ ಹಾಗೂ ಸಂಗಮ ಸಂಸ್ಥೆಯ ನೇತೃತ್ವದಲ್ಲಿ ಲೈಂಗಿಕ ಅಲ್ಪಸಂಖ್ಯಾತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.  ಲೈಂಗಿಕ ಅಲ್ಪಸಂಖ್ಯಾತರ ವ್ಯಕ್ತಿಗಳ ಹಕ್ಕುಗಳ ರಕ್ಷಣೆ ಮಸೂದೆ ಹಾಗೂ ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟುವಿಕೆ, ರಕ್ಷಣೆ ಹಾಗೂ ಪುನರ್‌ವಸತಿ ಬಿಲ್‌ಗಳನ್ನು ಲೈಂಗಿಕ ಅಲ್ಪಸಂಖ್ಯಾತರ ಸಲಹೆ ಪಡೆಯದೆ ಲೋಕಸಭೆಯಲ್ಲಿ ಮಂಡಿಸಲಾಗಿದೆ. ಈಗ ರಾಜ್ಯಸಭೆಯಲ್ಲಿ ಮಂಡಿಸುವುದು ಬಾಕಿ ಇದೆ. ಬಿಲ್‌ಗಳನ್ನು ರಾಜ್ಯಸಭೆಯಲ್ಲಿ ಮಂಡಿಸದೆ ರಾಜ್ಯಸಭೆಯ ವಿಶೇಷ ಸಮಿತಿಗೆ ವಹಿಸಬೇಕು […]