ಉಡುಪಿ: ಪಿಯು ಪ್ರಾಯೋಗಿಕ ಪರೀಕ್ಷೆ ನಾಳೆಗೆ ಮುಂದೂಡಿಕೆ

ಉಡುಪಿ, ಫೆ.17: ಇಂದಿನಿಂದ ಪ್ರಾರಂಭಗೊಳ್ಳಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪ್ರಾಯೋಗಿಕ ಪರೀಕ್ಷೆಗಳನ್ನು ತಾಂತ್ರಿಕ ಕಾರಣಗಳಿಂದಾಗಿ ನಾಳೆಗೆ ಮುಂದೂಡಲಾಗಿದೆ ಎಂದು ಡಿಡಿಪಿಯು ಮಾರುತಿ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳಲ್ಲಿ ನಾಳೆಯಿಂದ ಪ್ರಾಯೋಗಿಕ ಪರೀಕ್ಷೆಗಳು ಪಾರಂಭಗೊಳ್ಳಲಿವೆ ಎಂದವರು ಹೇಳಿದ್ದಾರೆ. ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆಗಳನ್ನು ಇಂದಿನಿಂದ ಮಾ.25ರೊಳಗೆ ಮುಗಿಸಲು ರಾಜ್ಯ ಪ.ಪೂ. ಶಿಕ್ಷಣ ಮಂಡಳಿ ಸೂಚನೆ ನೀಡಿದೆ. ಅದರಂತೆ ಜಿಲ್ಲೆಯ ವೇಳಾಪಟ್ಟಿ ತಯಾರಿಸಲಾಗುವುದು ಎಂದು ಮಾರುತಿ ತಿಳಿಸಿದ್ದಾರೆ. ಇಂದು ನಡೆಯಬೇಕಿದ್ದ ಪ್ರಾಯೋಗಿಕ ಪರೀಕ್ಷೆಯನ್ನು ಮಾ.11ರಂದು ನಡೆಸಲಾಗುತ್ತಿದೆ […]